ಬೆಂಗಳೂರು : ಬುಧವಾರ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯ ಅರ್ಪಿಸುವ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಉಗ್ರರು ರಾಜಾರೋಷವಾಗಿ ಓಡಾಡುತ್ತಿರುವುದಕ್ಕೆ ಕಾಂಗ್ರೆಸ್ ಅವರ ರಕ್ಷಣೆಗೆ ನಿಂತಿರುವುದೇ ಕಾರಣ ಎಂದು ಆರೋಪಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ನೆಲಸಮವಾಗಿದ್ದ ಭಯೋತ್ಪಾದನಾ ಚಟುವಟಿಕೆಗಳು ಮತ್ತೆ ತಲೆಯೆತ್ತಲಾರಂಭಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.ಬಿಜೆಪಿ ಅಧಿಕಾರದಲ್ಲಿದ್ದಾಗ ಹಲವು