ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಮೈಸೂರಲ್ಲಿ ಪ್ರತಿಭಟನೆ ನಡೆಸಲಾಗಿದೆ.. ಮೈಸೂರಿನಲ್ಲಿ ಕರ್ನಾಟಕ ಸೇನಾ ಪಡೆ ಮತ್ತು ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಪೊರಕೆ ಹಿಡಿದು ಪ್ರತಿಭಟನೆ ನಡೆಸಲಾಗಿದೆ.. ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗಿದೆ.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.