ನಗರದ ಜಿಲ್ಲಾಧಿಕಾರಿ ಕಚೇರಿ ಮುಂದುಗಡೆ ಬಿಜೆಪಿ ಸರ್ಕಾರ, ನೂತನ ಸಚಿವ ಸಂಪುಟಕ್ಕೆ ಹಾಗೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ದಶಕಗಳಿಂದ ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ, ಸಂಪುಟದಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿಲ್ಲ, ಈ ಭಾಗದ ಶಾಸಕರನ್ನು ಕಡೆಗಣಿಸುತ್ತಿದ್ದೀರಿ. ಇದರಿಂದ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಹೊಣೆಯಾಗಬೇಕಾಗುತ್ತದೆ ಎಂದು ಆರೋಪಿಸಿದರು. ರಾಯಚೂರು ಜಿಲ್ಲೆಗೆ ಕಳೆದ ಯಡಿಯೂರಪ್ಪನವರ ಸರ್ಕಾರದಲ್ಲಿಯೂ ಸಚಿವ ಸ್ಥಾನ ನೀಡಲಿಲ್ಲ, ಈ