ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಹಲವು ಪ್ರಾಮಾಣಿಕ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರಾಮಾಣಿಕ ಪಿಎಸ್ಐ ಅಭ್ಯರ್ಥಿಗಳು ನಮಗೆ ನ್ಯಾಯಬೇಕು ಯಾರೋ ಮಾಡಿರುವ ತಪ್ಪಿಗೆ ನಮಗೆ ಈ ರೀತಿ ಯಾಕೆ ಮಾಡುತ್ತಿದ್ದಾರೆ ಅಂಥ ಪ್ರಶ್ನೆ ಮಾಡುತ್ತಿದ್ದಾರೆ. ನಗರದ ಫ್ರೀಡಂ ಪಾರ್ಕ್ ಬಳಿ ಉಪವಾಸ ಕೈಗೊಂಡು ಮರು ಪರೀಕ್ಷೆ ವಿರೋಧಿಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದಾರೆ.