ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ 9 ನೇ ದಿನಕ್ಕೆ ಕಾಲಿಟ್ಟಿದೆ.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ NHM ( ರಾಷ್ಟೀಯ ಆರೋಗ್ಯ ಅಭಿಯಾನ)ಒಳಗುತ್ತಿಗೆ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದು,ಗುತ್ತಿಗೆ ಸೇವೆಯನ್ನು ಖಾಯಂ ಮಾಡಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ನೌಕರರು ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಖಾಯಂ ಮಾಡುವರೆಗೂ ಪ್ರತಿಭಟನೆ ಮುಂದುವರಿಯುವುದು.9 ದಿನಗಳು ಆದರೂ ಯಾವ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ಮಾಡಿಲ್ಲ