ಬೆಂಗಳೂರು : ಶಾಸಕ ರಾಮಲಿಂಗರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನಲೆಯಲ್ಲಿ ರಾಮಲಿಂಗರೆಡ್ಡಿ ಬೆಂಬಲಿಗರು ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ನೇತೃತ್ವದಲ್ಲಿ ಗೆಸ್ಟ್ ಹೌಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ರಾಮಲಿಂಗ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ