ಬೆಂಗಳೂರು : ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ತನಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಬರುತ್ತಿದ್ದು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ ಇಂದು ಸಂಚಾರದಲ್ಲಿ ವ್ಯತ್ಯಯವಾಗಿ ಸಾರ್ವಜನಿಕರಿಗೆ ತೊಂದರೆ