ಕುಡಿಯುವ ನೀರು ಪೂರೈಕೆಯಾಗದ ಹಿನ್ನಲೆ ಗ್ರಾಮ ಪಂಚಾಯತ ಸದಸ್ಯರು ಹಾಗೂ ಅಧಿಕಾರಿಗಳನ್ನ ಕೂಡಿಹಾಕಿ ಬೀಗ ಜಡಿದು ಪ್ರತಿಭಟನೆಗೆ ಮುಂದಾಗಿರುವ ಘಟನೆ ನಡೆದಿದೆ.ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಸರಿಯಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ಬೇಸತ್ತ ಸ್ಥಳೀಯರು ಪಂಚಾಯತಿಗೆ ಮುತ್ತಿಗೆ ಹಾಕಿ ಕಚೇರಿ ಮುಂದೆ ಟಾಯರ್ ಸುಟ್ಟು ಪ್ರತಿಭಟನೆ ಮಾಡಿದರು. ಹನಿ ನೀರಿಗೂ ಹಾಹಾಕಾರ ಪಡುವಂತಹ ಪರಿಸ್ಥಿತಿ