ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಸೆಂಟ್ರಲ್ ಕಾಲೇಜು ಆವರಣದಲ್ಲಿ ವಿವಿಧ ಸಂಘಟನೆಗಳು ಪ್ರತಿರೋಧ ಸಮಾವೇಶ ಆಯೋಜಿಸಿದೆ. ಈ ಸಮಾವೇಶಕ್ಕೆ ವಿವಿಧ ವಿದ್ಯಾರ್ಥಿ ಸಂಘಟನೆಗಳು, ದಲಿತ ಸಂಘಟನೆಗಳು, ರೈತಪರ ಸಂಘಟನೆಗಳು ಸಾಥ್ ಕೊಡುತ್ತಿವೆ. ಸಮಾವೇಶದಲ್ಲಿ ಸಿಪಿಎಂ ನೇತಾರ ಸೀತಾರಾಂ ಯಚೂರಿ, ವಕೀಲ ಪ್ರಶಾಂತ್ ಭೂಷಣ್, ಸಾಮಾಜಿಕ ಹೋರಾಟಗಾರ ತೀಸ್ತಾ ಸೆಟಲ್ ವಾಡ್, ಪತ್ರಕರ್ತ ಸಾಯಿನಾಥ್, ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಗೌರಿ ಲಂಕೇಶ್ ತಾಯಿ ಇಂದಿರಾ,