ಹುಬ್ಬಳ್ಳಿ : ಪೌರತ್ವ ಕಾಯ್ದೆ ವಿರೋಧಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನಾಕಾರರು ಪೊರಕೆ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ಹುಬ್ಬಳಿಯಲ್ಲಿ ನಡೆದಿದೆ.ಎದೆ ಸೀಳಿದ್ರೆ ಎರಡಕ್ಷರಗಳು ಇಲ್ಲದವರು, ಪಂಚರ್ ಹಾಕುವವರು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪೌರಕಾರ್ಮಿಕರು, ಕಟ್ಟಡ ಕಾರ್ಮಿಕರು, ಗ್ಯಾರೇಜ್ ಕೆಲಸಗಾರರ ವಿರುದ್ಧ ಕೀಳಾಗಿ ಮಾತನಾಡಿದ್ದಕ್ಕೆ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.