ಇಂಧನ ಸಚಿವ ಕೆಜೆ ಜಾರ್ಜ್ ಅವರು ಕೇಂದ್ರ ಸರ್ಕಾರದ ವಿದ್ಯುತ್, ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಅವರನ್ನು ಕರ್ನಾಟಕದ ಇಂಧನ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲು ಬುಧವಾರ ಸಂಜೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆ ಜೆ ಜಾರ್ಜ್ ಅವರು ವಿದ್ಯುತ್ ಬೇಡಿಕೆಯ ಹೆಚ್ಚಳದ ದೃಷ್ಟಿಯಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಈ ವೇಳೆ ಕೇಂದ್ರೀಯ ಉತ್ಪಾದನಾ ಕೇಂದ್ರಗಳಲ್ಲಿ ಹೆಚ್ಚಿನ