ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಶನವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು, ಅವರ ಅರ್ಹತೆ ಏನು ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ