ಬೆಂಗಳೂರು: ವಿಜಯಪುರ ಜಿಲ್ಲೆಯ ಕೊಂಕಣಗಾಂವ್ ಬಳಿ ಭೀಮಾತೀರದ ಹಂತಕನ ಎನ್ ಕೌಂಟರ್ ಪ್ರಕರಣದಲ್ಲಿ ಗುಂಡೇಟಿಗೆ ಒಳಗಾಗಿದ್ದ ಚಡಚಣ ಠಾಣೆ ಪಿಎಸ್ಐ ಗೋಪಾಲ್ ಹಳ್ಳೂರ್ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ 2 ಗುಂಡು ತೆಗೆದಿದ್ದು, ಗೋಪಾಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ 15 ದಿನ ಸ್ಪರ್ಶ ಆಸ್ಪತ್ರೆಯಲ್ಲಿ ಪಿಎಸ್ಐ ಚಿಕಿತ್ಸೆ ಪಡೆಯಲಿದ್ದು, ಮುಂದಿನ ನಾಲ್ಕು ತಿಂಗಳು ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು