ಬೆಂಗಳೂರು : ಪಿಎಸ್ಐ ಪ್ರಕರಣ ಕಾಂಗ್ರೆಸ್ ಸರ್ಕಾರ ಇದ್ದಾಗ ನಡೆದಿರುತ್ತಿದ್ದರೆ, ಅವರು ವ್ಯವಸ್ಥಿತವಾಗಿ ಮುಚ್ಚಿ ಹಾಕುತ್ತಿದ್ದರು. ಏಕೆಂದರೆ ಈ ಹಿಂದೆಯೂ ಅವರು ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ವ್ಯವಸ್ಥೆಯನ್ನು ಸ್ವಚ್ಛ ಮಾಡಲು ಬಂದಿದ್ದೇವೆ. ನಮ್ಮ ಈ ಕೆಲಸ ಹೀಗೆಯೇ ಮುಂದುವರಿಯುತ್ತದೆ. ಗೃಹ ಸಚಿವ ಆರಗ ಜ್ಞಾನೇಂದ್ರ ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ.ಇದರಿಂದಲೇ ಹಲವರ