7ನೇ ವೇತನ ಜಾರಿಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಸರ್ಕಾರಿ ನೌಕರರು ಮುಂದಾಗಿದ್ದರಿಂದ ರಾಜ್ಯದಲ್ಲಿ ಭಾರಿ ಸಮಸ್ಯೆ ಎದುರಾಗಿತ್ತು. ಸರ್ಕಾರಿ ಆಸ್ಪತ್ರೆಗಳ ಮುಂದೆ ರೋಗಿಗಳು ನರಳಾಡುವ ಪರಿಸ್ಥಿತಿ ಎದುರಾಯ್ತು. ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಸರ್ಕಾರಿ ಕಚೇರಿಗಳು ಖಾಲಿ ಖಾಲಿಯಾಗಿವೆ. ಇದರ ನಡುವೆ ಇಲ್ಲೊಂದು ಸರ್ಕಾರಿ ಕಚೇರಿ ಶಾಸಕರನ್ನು ಒಳಗಡೆ ಕೂರಿಸಿಕೊಂಡು ಕೆಲಸ ಮಾಡಿದ್ದು ಆಚೆ ಜನ ಸಾಮಾನ್ಯರು ಕಾದುಕುಳಿತ ಘಟನೆ ನಡೆದಿದೆ. ಇಂದು ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಬಹುತೇಕ ಸರ್ಕಾರಿ ಕಚೇರಿಗಳಿಗೆ