ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಇನ್ನು 1 ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು. ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಕೂಡಲೆ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ ಕಾನ್ವಿಲ್ಕರ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಗಿದ್ದು, ದೆಹಲಿ, ಮಹಾರಾಷ್ಟ್ರ ಕೇಸ್ ಗಳ ಜೊತೆ ಕರ್ನಾಟಕದ ಪ್ರಕರಣದ ವಿಚಾರಣೆ ನಡೆಸಲಾಗಿದೆ.