ರಾಮನಗರ : ಎಲ್ಲ ವಿಧಾನ ಪರಿಷತ್ ಸದಸ್ಯರೂ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ ಎಂದು ಹೇಳುವುದರ ಮೂಲಕ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನಿಸಿದ್ದೇನೆ. ಮುಂದಿನ ನಡೆಯ ಬಗ್ಗೆ ತೀರ್ಮಾನಿಸಿಲ್ಲ. 2-3 ಜನ ಹೊರತುಪಡಿಸಿ ಉಳಿದೆಲ್ಲ ಪರಿಷತ್ ಸದಸ್ಯರು ಪಕ್ಷ ಬಿಡುವ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಎಲ್ಲರೂ ಸೇರಿ ತೀರ್ಮಾನ