ಮಂಗಳೂರು : ಹಿಜಬ್ ಹೋರಾಟಕ್ಕೆ ಸಹಾಯ ಮಾಡುವಂತೆ ಕೇಳಿಕೊಂಡರೂ ಯು.ಟಿ.ಖಾದರ್ ಸ್ಪಂದಿಸಿಲ್ಲ. ಅವರೆಲ್ಲೋ ಕ್ರಿಕೆಟ್ ಆಡುತ್ತಿದ್ದಾರೆ ಎಂಬ ಕಾಲೇಜು ವಿದ್ಯಾರ್ಥಿನಿ ಗೌಸಿಯಾ ಆರೋಪಕ್ಕೆ ಶಾಸಕ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಾಲೇಜಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಬ್ ಹೋರಾಟ ಮುಂದುವರಿದಿದೆ. ನಿನ್ನೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ನಮಗೆ ಸಲಹೆ, ಸಹಕಾರ ನೀಡುವಂತೆ ನಾಯಕರಾದ ಯು.ಟಿ.ಖಾದರ್ ಅವರನ್ನು ಸಂಪರ್ಕ ಮಾಡಿದ್ದೆವು.ಅವರು ಸಹಾಯ ಮಾಡಿಲ್ಲ ಅವರೆಲ್ಲೋ ಕ್ರಿಕೆಟ್