ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಹಾಯವಾಗುವಂತಹ ಹತ್ತು ಹಲವು ವಿನೂತನ ಯೋಜನೆಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡುತ್ತಾ ಬಂದಿದೆ. ಸದ್ಯ ಮತ್ತೊಂದು ಹೊಸ ಯೋಜನೆ ಜಾರಿ ಮಾಡಲು ನಮ್ಮ ಮೆಟ್ರೋ ಮುಂದಾಗಿದ್ದು, ಮುಂದಿನ ತಿಂಗಳ ಅಂತ್ಯಕ್ಕೆ ಕ್ಯೂ ಆರ್ ಕೋಡ್ ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಈಗಾಗಲೇ ಟೋಕನ್, ಸ್ಮಾರ್ಟ್ ಕಾರ್ಡ್ ಮತ್ತು ಪಾಸ್ನ್ನು ಬಳಸಿ ಪ್ರಯಾಣಿಸಲು ನಮ್ಮ ಮೆಟ್ರೋ ಅವಕಾಶ ಕಲ್ಪಿಸಿದೆ. ಈಗ ಇನ್ನೊಂದು ಹೊಸ ಮಾದರಿಯ ವ್ಯವಸ್ಥೆ ಕಲ್ಪಿಸಲು