ಕೋವಿಡ್-19 ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡುವ ಸಂದರ್ಭದಲ್ಲಿ ಶಾಲೆಯನ್ನು ಸ್ಥಳಾವಕಾಶಕ್ಕಾಗಿ ನೀಡದ ಸರಕಾರಿ ಶಾಲೆ ಮುಖ್ಯ ಶಿಕ್ಷಕನನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪವೆಸಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವರನಾವದಗಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಶೋಕ ರಡ್ಡೇರ ಅವರನ್ನು ಸಿಸಿಎ ನಿಯಮ 1957 (ವರ್ಗೀಕರಣ ಹಾಗೂ ಮೇಲ್ಮನವಿ) ನಿಯಮ 10(1)ಡಿ ರನ್ವಯ ಇಲಾಖೆಯ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಸಾರ್ವಜನಿಕ