ಬೆಂಗಳೂರು : ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆಯನ್ನು ವಿರೋಧಿಸಿ ಬಿಜೆಪಿಯ ಮಾಜಿ ಡಿಸಿಎಂ ಆರ್. ಅಶೋಕ್ ಅವರು ಸಂವಿಧಾನದತ್ತ ಸ್ಥಾನದಲ್ಲಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಕ್ಸಲ್ ರೀತಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಂಗೆ ಎಂಬ ಪದವನ್ನು ಯಾರೂ ಪ್ರಯೋಗ ಮಾಡಲ್ಲ. ದಂಗೆ ಪದದ ಅರ್ಥ ಸಿಎಂ ಗೊತ್ತಿಲ್ಲ ಅಂತಾ ಕಾಣ್ಸುತ್ತೆ.