ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಬಿಜೆಪಿಯ ಹೋರಾಟಕ್ಕೆ ಸಿಕ್ಕ ದೊಡ್ಡ ಜಯ ಎಂದು ಬಣ್ಣಿಸಿದ್ದಾರೆ. ನಾಗೇಂದ್ರ ಅವರು ರಾಜೀನಾಮೆ ನೀಡುವಾಗ ಮನುಸ್ಮೃತಿ ಹಾಗೂ ಮನುಪಂಥಿಗಳು ದಲಿತ ನಾಯಕರ ಬೆಳವಣಿಗೆ ತಡೆಯುತ್ತಿದ್ದಾರೆ ಎಂದು ಆರೋಪಿಸಿರುವುದನ್ನು ಅಶೋಕ್ ಅವರು ಸಚಿವರ ಭ್ರಷ್ಟಾಚಾರ ಮುಚ್ಚಿಹಾಕಲು ಬಳಸಿದ ದಲಿತ/ಕ್ರಾಂತಿ ಕಾರ್ಡ್ ಎಂದು ಬಣ್ಣಿಸಿ ಕಟುವಾಗಿ