ಸಿಎಂ ಸಿದ್ದರಾಮಯ್ಯ ಅಲ್ಲ ಬೆಂಕಿರಾಮಯ್ಯರಾಗಿದ್ದಾರೆ ಎಂದು ಮಾಜಿ ಗೃಹಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟಾಗಿದೆ. ವಿಧಾನಸಭೆ ಚುನಾವಣೆ ಆರು ತಿಂಗಳುಗಳಿರುವಾಗಲೇ ಸೋಲಿನ ಭೀತಿ ಕಾಡುತ್ತಿದೆ. ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಶಸ್ತ್ರಾಸ್ತ್ರ ತ್ಯಜಿಸಿದೆ ಎಂದು ಲೇವಡಿ ಮಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಭ್ರಷ್ಟ ಸರಕಾರವನ್ನು ಕಿತ್ತೊಗೆದು ಬಿಜೆಪಿ ಸರಕಾರ ಅಧಿಕಾರದ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದರು.