ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆಯಿಂದಾದ ಹಾನಿ ಕುರಿತಾಗಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ವಾಡಿಕೆಗಿಂತ ಹೆಚ್ಚು ಮಳೆ ಬಂದಿದ್ದರಿಂದ ಸಮಸ್ಯೆಯಾಗಿದೆ. ಈ ಬಾರಿ ಮಳೆಯಿಂದಾಗಿ ಬೊಮ್ಮನಹಳ್ಳಿ ಹಾಗೂ ಮಹದೇವಪುರ ಭಾಗದಲ್ಲಿ ಅತಿ ಹಾನಿಯಾಗಿದೆ. ಇಂದು ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ ಎಂದರು. ಹಾನಿಗೊಳಗಾದ ಭಾಗದಲ್ಲಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದೆ.