ಬೆಂಗಳೂರು: ಗ್ಯಾರಂಟಿ ಯೋಜನೆಯಲ್ಲಿ ಭ್ರಷ್ಟಾಚಾರವಾಗಿರುವ ಅನುಮಾನವಾಗಿದ್ದು ಉತ್ತರ ಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ ಬರೆದಿದ್ದಾರೆ.ಮೊನ್ನೆ ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ ಹಣ ಪಾವತಿ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಪ್ಪು ಲೆಕ್ಕ ನೀಡಿದ್ದರು. ಹೀಗಾಗಿ ನಮಗೆ ಗ್ಯಾರಂಟಿ ಯೋಜನೆಯಲ್ಲಿ ಸಾಕಷ್ಟು ಭ್ರಷ್ಟಾಚಾರವಾಗುತ್ತಿದೆ ಎಂಬ ಅನುಮಾನವಿದೆ ಎಂದು ಅಶೋಕ್ ಹೇಳಿದ್ದಾರೆ.‘ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ