ರಾಮನಗರ : ವಕೀಲರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿರುವ ಪ್ರಕರಣಕ್ಕೆ ರಾಜಕೀಯ ತಿರುವು ದೊರೆಕಿದೆ. ಎಸ್ಡಿಪಿಐ ಕಾರ್ಯಕರ್ತ ಹಾಗೂ ವಕೀಲ ಚಾಂದಾಪಾಷಾ ಗ್ಯಾನವ್ಯಾಪಿ ಮಸೀದಿಯ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿ ಬಂಧಿತನಾಗಿದ್ದ. ಈಗನ ಆತನ ಕಡೆಯವರ ಕುಮ್ಮಕ್ಕಿನಿಂದ ಸುಳ್ಳು ದೂರು ನೀಡಲಾಗಿದೆ ಎಂದು ಬಿಜೆಪಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.ಇಂದು ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಪ್ರತಿಭಟನಾ ಸ್ಥಳಕೆ ಭೇಟಿ ನೀಡಿ ವಕೀಲರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.