ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್ ನ ಕಂದಾಯ ಸಚಿವ ಆರ್. ವಿ.ದೇಶಪಾಂಡೆ ಅವರು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗದಲ್ಲಿನ ಬಡವರಿಗೆ ಶೇ. 10% ರಷ್ಟು ಮೀಸಲಾತಿ ಜಾರಿಗೊಳಿಸಿದೆ. ಇದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಮೂಲಕ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿದ್ದು, ಇದಕ್ಕೆ ಅನುಮೋದನೆ ಸಹ ಪಡೆದಿರುವುದು