ಬೆಂಗಳೂರು : ಅದು 2019ರ ಲೋಕಸಭೆ ಚುನಾವಣೆ ಸಂದರ್ಭ. ಆಗ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದ್ಯ ಸಂಸತ್ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಅದೇ ಕೋಲಾರ ನೆಲದಿಂದಲೇ ಕಾಂಗ್ರೆಸ್ ನಾಯಕರ ಜೊತೆಗೂಡಿ ‘ಸತ್ಯಮೇವ ಜಯತೆ’ ಹೋರಾಟ ಆರಂಭಿಸಲು ರಾಹುಲ್ ಗಾಂಧಿ ಬರುತ್ತಿದ್ದಾರೆ.ತಾನು ಸಂಸದ ಸ್ಥಾನದಿಂದ ಅನರ್ಹಗೊಳ್ಳಲು ಕಾರಣವಾಗಿದ್ದ ನೆಲದಿಂದಲೇ ಈಗ ಮತ್ತೆ