ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಕೈಗೊಳ್ಳುವ ಬಗ್ಗೆ ಕೊನೆಗೂ ಅವರ ಕಚೇರಿಯ ಮೂಲಗಳು ಅಧಿಕೃತ ಹೇಳಿಕೆ ಹೊರಹಾಕಿದ್ದು, ರಾಹುಲ್ ಅ.6 ಮತ್ತು 7ರಂದು ರಾಜ್ಯಕ್ಕೆ ಭೇಟಿ ನೀಡುವುದಾಗಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಲಾಗಿದೆ. ಇಂದು ಮಾಡಲಾಗಿರುವ ಟ್ವೀಟ್ನಲ್ಲಿ, ರಾಜ್ಯದಲ್ಲಿ ಹೆಚ್ಚು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆ ಮಂಡ್ಯಗೆ ಮೊದಲು ಭೇಟಿ ನೀಡಿ ರೈತ ಕುಟುಂಬಗಳಿಗೆ ಸಾಂತ್ವನ