ಏಪ್ರಿಲ್.10 ರಂದು ಕೋಲಾರಕ್ಕೆ ರಾಹುಲ್ ಗಾಂಧಿ ಅವರು ಆಗಮಿಸುತ್ತಿರುವ ಹಿನ್ನಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ನೇತೃತ್ವದಲ್ಲಿ ದೆಹಲಿಯ ತಂಡ ಕೋಲಾರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ, ಏಪ್ರಿಲ್ ,10 ರಂದು ಕೋಲಾರದಲ್ಲಿ ಜೈ ಭಾರತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ