ಮೈಸೂರು: ಮೈಸೂರು ಜಿಲ್ಲೆ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ್ದಾರೆ.ಈ ವೇಳೆ ಮಾತನಾಡಿದ ಅವರು ಕೇಂದ್ರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೀರವ್ ಮೋದಿ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು ನಮ್ಮ ದೇಶದಲ್ಲಿ ಈಗ ಉದ್ಯಮಿಗಳಿಗೆ ಸುಲಭವಾಗಿ ಸಾಲ ಸಿಗುತ್ತಿದೆ. ಆದರೆ ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದವರಿಗೆ ಸಾಲ ಸಿಗಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.ಕಾಂಗ್ರೆಸ್ ಒಂದು ದೇಶ,