ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮೇಲೆ ರಾಹುಲ್ ಗಾಂಧಿಗೆ ಮೊದಲ ಚುನಾವಣೆ ಕರ್ನಾಟಕ ವಿಧಾನಸಭೆ ಚುನಾವಣೆ. ಈ ಚುನಾವಣೆಯನ್ನು ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ರಾಹುಲ್ ಗಾಂಧಿ ಹೊಸ ಹೆಜ್ಜೆ ಇಡಲು ತೀರ್ಮಾನಿಸಿದ್ದಾರೆ. ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಗಿಟ್ಟಿಸುವ ಮೂಲಕ ಪಕ್ಷಕ್ಕೆ ಅಂಟಿರುವ ಸೋಲಿನ ಹಣೆಪಟ್ಟಿ ಕಳಚಲು ರಾಹುಲ್ ಪಣ ತೊಟ್ಟಿದ್ದಾರೆ. ಅದಕ್ಕಾಗಿ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಜತೆ ಚುನಾವಣೆ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.ಈ ನಿಟ್ಟಿನಲ್ಲಿ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ