ರಾಜ್ಯದಲ್ಲಿ ನಡೆದಿರುವ ಘಟನೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಾಯಿ ಬಿಡಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಹಾಲ್ ಗಾಂಧಿ ಅವರು ಪ್ರವಾಸ ನಡೆಸುತ್ತಿರುವುದರಿಂದ ಕಾಂಗ್ರೆಸ್ ದುರಹಂಕಾರದ ಬಗ್ಗೆ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ 38 ಗಂಟೆಗಳ ಬಳಿಕ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ನನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿಗಳ ಮಾತಿಗೆ ಬೆಲೆಯಿಲ್ಲವೇ, ಅಧಿಕಾರಿಗಳು