ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಆಗಲು ಸೂರ್ಯ ಅಥವಾ ಚಂದ್ರನಲ್ಲಿಗೆ ಪ್ರಯಾಣಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವ್ಯಂಗ್ಯವಾಡಿದ್ದಾರೆ. ಬಿಹಾರದ ನಲಂದ ಜಿಲ್ಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸನಾತನ ಧರ್ಮದ ಬಗ್ಗೆ ಪ್ರಶ್ನೆ ಎತ್ತಿದವರಿಗೆ 2024ರ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ವಿರೋಧ ಪಕ್ಷಗಳ