ಭಾರತ್ ಜೋಡೋ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಇದೀಗ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ತಮಿಳುನಾಡಿನ ಗಡಿ ಮೂಲಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಬಂದ ಅವರು ಈಗ ಮೈಸೂರು ಜಿಲ್ಲೆಯಲ್ಲಿ ತಮ್ಮ ತಂಡದೊಂದಿಗೆ ಪಾದಯಾತ್ರೆ ಮುಂದುವರಿಸಿದ್ದಾರೆ. ಇದರ ಮಧ್ಯೆ ಭಾನುವಾರದಂದು ರಾಹುಲ್ ಗಾಂಧಿಯವರು ಸುರಿಯುತ್ತಿರುವ ಮಳೆಯಲ್ಲಿ ಭಾಷಣ ಮಾಡಿರುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಂಡಿಪಾಳ್ಯ ಸಮೀಪ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಿದ್ದರು. ನಈ ಫೋಟೋವನ್ನು