ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ರಾಜ್ಯಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಕಳಸಾ ಬಂಡೂರಿ, ಮಹದಾಯಿ ಯೋಜನೆಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಾಟಾಳ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತದೆ.ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರೈಲು ತಡೆ ಚಳವಳಿಯನ್ನು ನಡೆಸಲಾಗುತ್ತಿದೆ. ಪ್ರತಿಭಟನೆಗೆ 500ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.ರೈತರು ಮತ್ತು ಕನ್ನಡಪರ ಸಂಘಟನೆಗಳು ಇದರಲ್ಲಿ