ಬೆಂಗಳೂರು : ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿದ್ದಾರೆ. ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತದಿಂದ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ