ಜುಲೈ ತಿಂಗಳಲ್ಲಿ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ಮತ್ತೆ ವರುಣನ ಭೀತಿ ಎದುರಾಗಿದೆ. ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ