ಬೆಂಗಳೂರು: ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯ ರಾಜಧಾನಿ ಅಕ್ಷರಶಃ ದ್ವೀಪದಂತಾಗಿದೆ. ಎಲ್ಲಿ ನೋಡಿದರೂ ನೀರು ಎನ್ನುವ ಪರಿಸ್ಥಿತಿ ಉಂಟಾಗಿದೆ. ರಾತ್ರಿಯಿಂದಲೇ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೆಜೆಸ್ಟಿಕ್, ಶಾಂತಿ ನಗರ, ಹಲಸೂರು, ಹೆಬ್ಬಾಳ ಮುಂತಾದೆಡೆಯಲ್ಲಿ ರಸ್ತೆಯಲ್ಲಿ ಎಲ್ಲಾ ಕಡೆ ನೀರು ತುಂಬಿಕೊಂಡಿದೆ. ಕೆಲ ಬಡಾವಣೆಗಳಲ್ಲಿ ನೀರು ತುಂಬಿಕೊಂಡಿದ್ದು, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕಡೆ ರಾತ್ರಿಯಿಂದಲೇ ವಿದ್ಯುತ್ ವ್ಯತ್ಯಯವಾಗಿದೆ. ಜನರು ತಮ್ಮ ದೈನಂದಿನ ಕೆಲಸಗಳಿಗೆ ಮನೆಯಿಂದ ಹೊರಬರಲಾರದಂತಹ ಪರಿಸ್ಥಿತಿ