ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹಲವು ಜಿಲ್ಲೆಗಳಿಗೆ ಹಳದಿ