ಚಾಮರಾಜನಗರ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾರಿ ಮಳೆಗೆ ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತವಾಗಿದೆ.ಯಳಂದೂರು ತಾಲ್ಲೂಕುಗಳಲ್ಲಿ ತಡರಾತ್ರಿಯಿಂದ ಮುಂಜಾನೆಯವರೆಗೂ ಬಿರುಸಿನ ಮಳೆಯಾಗಿದೆ. ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ತಾಲ್ಲೂಕಿನ ಮಂಗಲ ಗ್ರಾಮದ ವ್ಯಾಪ್ತಿಯಲ್ಲಿ 14.3 ಸೆಂ.ಮೀನಷ್ಟು ಮಳೆ ಬಿದ್ದಿದೆ. ಕೆಂಪನಪುರ ಹಾಗೂ ಆಲೂರಿನಲ್ಲಿ 13.5 ಸೆಂ.ಮೀನಷ್ಟು ಮಳೆ ಸುರಿದಿದೆ. ಚಾಮರಾಜನಗರದ ಐತಿಹಾಸಿಕ ದೊಡ್ಡರಸನ ಕೊಳ ಪೂರ್ಣವಾಗಿ ಭರ್ತಿಯಾಗುವುದಕ್ಕೆ ಇನ್ನು ಒಂದು ಮೆಟ್ಟಿಲಷ್ಟೇ