ಭೀಕರ ಮಳೆಗೆ ನಲುಗಿದ್ದ ಕೊಡಗಿನಲ್ಲಿ ಮತ್ತೆ ಮಳೆ ಅವತರಿಸಿದೆ.ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಹಿಂದೆ ನಿರಂತರವಾಗಿ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿ ಅಪಾರ ಹಾನಿಗೆ ಮಳೆ ಕಾರಣವಾಗಿತ್ತು.ಈಗಲೂ ಗುಡುಗು, ಮಿಂಚಿನೊಂದಿಗೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲೂಕುಗಳಲ್ಲಿ ಜೋರಾಗಿಯೇ ಮಳೆ ಸುರಿಯುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ವಿರಾಜಪೇಟೆಯಲ್ಲಿ ಮಳೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಕೆಲಕಾಲ ಅಸ್ತವ್ಯವಸ್ತವಾಗಿತ್ತು. ಈ ಹಿಂದಿನ ಪ್ರಕೃತಿ ವಿಕೋಪದಿಂದ ತತ್ತರಿಸಿದ್ದ ಗ್ರಾಮಗಳು ಈಗ ಸಹಜ ಸ್ಥಿತಿಯತ್ತ ಬರುತ್ತಿವೆ.