ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ವೀಕೆಂಡ್ ಅಂತ ಹೊರಗೆ ತೆರಳುವ ಮುನ್ನ ಒಮ್ಮೆ ಯೋಚಿಸಿ. ಇಲ್ಲವಾದ್ರೆ ಮಳೆಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ, ಸಾಧಾರಣ ಚಳಿ ಮತ್ತು ಬೆಳಗಿನ ಜಾವ ದಟ್ಟವಾದ ಮಂಜು ಆವರಿಸಿರಲಿದೆ.ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.