ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆಯನ್ನು ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಸೆ.5 ಮತ್ತು 6 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು,