ಕಲಬುರಗಿ : ಮಳೆಯ ಹಿನ್ನಲೆ ಸಿಎಂ ಕುಮಾರಸ್ವಾಮಿ ತಮ್ಮ ಇಂದಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಮುಂದೂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸಿಎಂ ಕುಮಾರಸ್ವಾಮಿ ಚಂಡರಕಿ ಗ್ರಾಮದಲ್ಲಿ ಮೊದಲ ದಿನ ಗ್ರಾಮ ವಾಸ್ತವ್ಯ ಹೂಡಿದ್ದು, ಅದು ಈಗ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮುಖ್ಯಮಂತ್ರಿಗಳ 2ನೇ ದಿನದ ಗ್ರಾಮವಾಸ್ತವ್ಯ ಕಲಬುರಗಿ ಜಿಲ್ಲೆ ಅಫ್ಜಲಪುರದ ಬಿ.ಹೇರೂರು ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಆದರೆ ರಾತ್ರಿಯಿಡೀ ಹೆರೂರಿನಲ್ಲಿ ಭಾರೀ ಮಳೆಯಾಗಿದ್ದು, ಸಿಎಂ ಕಾರ್ಯಕ್ರಮಕ್ಕೆ ಅಡ್ಡಿಯಾಗಿದ್ದು ಮಾತ್ರವಲ್ಲ, ಇಂದು ಕೂಡ ಭಾರೀ