ರಾಜ್ಯಸಭಾ ಚುನಾವಣೆಯಲ್ಲಿ 50 ಕ್ಕೂ ಹೆಚ್ಚು ಜನ ಶಾಸಕರ ಬೆಂಬಲವಿರುವುದರಿಂದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಗೆಲುವು ಸಾಧಿಸುತ್ತಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಎಂ.ಬಿ.ಪಾಟೀಲ್ ವಿರುದ್ದ ಮತ್ತೆ ಹರಿಹಾಯ್ದಿದ್ದಾರೆ. ಎಂ.ಬಿ ಪಾಟೀಲ್ಗೆ ನೇರವಾಗಿ ಕೇಳಲು ಬಯಸುತ್ತೇನೆ, ಕಾಮಗಾರಿ ಗುತ್ತಿಗೆ ನೀಡಿರುವುದರಲ್ಲಿ ಅವ್ಯವಹಾರ ನಡೆದಿರುವುದು ಸತ್ಯ. ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಅವರು ಹೇಳಿದಂತೆ ಕೇಳಲು ನಾನು ಸಿದ್ಧನಿದ್ದೇನೆ