ರಾಜ್ಯದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿದ್ದರೂ ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.