ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳು ಮತ್ತು ಬಿಜೆಪಿ ಪಕ್ಷದಿಂದ ಏಕೈಕ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಡಾ.ಎಲ್.ಹನುಮಂತಯ್ಯ, ಡಾ.ಸಯೀದ್ ನಾಸೀರ್ ಹುಸೈನ್ ಮತ್ತು ಜಿ.ಸಿ.ಚಂದ್ರಶೇಖರ್ ಜಯಗಳಿಸಿದ್ದರೆ ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ವಿಜಯ ಪತಾಕೆ ಹಾರಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ಬಿ.ಎಂ.ಫಾರೂಕ್ ಸೋಲನುಭವಿಸಿ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಮರಳಿದ್ದಾರೆ. ಒಟ್ಟು 188 ಮತಗಳು ಚಲಾವಣೆಯಾಗಿದ್ದು ನಾಲ್ಕು ಮತಗಳು ತಿರಸ್ಕ್ರತಗೊಂಡಿವೆ. ಕಾಂಗ್ರೆಸ್ ಪಕ್ಷದ ಡಾ.ಎಲ್.ಹನುಮಂತಯ್ಯ