ಬೆಂಗಳೂರು:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡುವ ಮೂಲಕ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, 2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಮನವಿ ಮಾಡಿದರು.