ಬೆಂಗಳೂರು : ಬಿಜೆಪಿ ಪಕ್ಷ ಹುಟ್ಟುವುದಕ್ಕೂ ಮುಂಚೆಯೇ ಶ್ರೀರಾಮ ಚಂದ್ರನ ಆರಾಧನೆ ಈ ದೇಶದಲ್ಲಿ ನಡೆಯುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಜ. 22 ರಂದು ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದ ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿರುವ ನಿರ್ಧಾರವನ್ನು ಬಿಜೆಪಿ ಒತ್ತಾಯದಿಂದ ತೆಗೆದುಕೊಂಡಿಲ್ಲ. ಕಾಂಗ್ರೆಸ್ ಹಿಂದಿನಿಂದಲೂ ಎಲ್ಲಾ ಧರ್ಮದವರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ದಿನ ವಿಶೇಷ